ಅಭಿಪ್ರಾಯ / ಸಲಹೆಗಳು

ಧ್ಯೇಯ ಮತ್ತು ಉದ್ಧೇಶ

  • ಬ್ಯಾರಿ ಸಾಹಿತ್ಯ ಅಕಾಡೆಮಿಗೆ ಸಂಬಂಧಿಸಿದಂತೆ ಕ್ಷೇತ್ರದಲ್ಲಿ ಅಧ್ಯಯನ ಮತ್ತು ಸಂಶೋಧನೆಗೆ ಉತ್ತೇಜನ ನೀಡುವುದು. ಈ ಉದ್ದೇಶಕ್ಕಗಿ ಸಂಶೋಧನಾಲಯ, ಗ್ರಂಥಾಲಯ ಮುಂತಾದುವನ್ನು ಸ್ಥಾಪಿಸುವುದು.

 

  • ಬ್ಯಾರಿ ಸಾಹಿತ್ಯ ಅಕಾಡೆಮಿತು ತನ್ನ ಉದ್ದೇಶಗಳ ಅಬಿವೃದ್ಧಿಗಾಗಿ ಮತ್ತು ಬೆಳವಣಿಗೆಗಾಗಿ ಬೇರೆ ಕಡೆಗಳಲ್ಲಿರುವ ಇದೇ ರೀತಿಯ ಅಕಾಡೆಮಿಗಳೊಂದಿಗೆ ಮತ್ತು ಕರ್ನಾಟಕದಲ್ಲಿರುವ ಇತರ ಸಂಸ್ಥೆಗಳೊಡನೆ ಸಹಕರಿಸುವುದು, ಉತ್ತೇಜನ ನೀಡುವುದು.

 

  • ಬ್ಯಾರಿ ಸಾಹಿತ್ಯ ಅಕಾಡೆಮಿಯ ಕಾರ್ಯಚಟುವಟಿಕೆಗಳ ಉದ್ದೇಶಕ್ಕಾಗಿ ಸರ್ಕಾರದಿಂದ ಪಡೆದ ಅನುದಾನ ಹಾಗೂ ವಿವಿಧ ಮೂಲಗಳಿಂದ ವಂತಿಗೆಗಳು ಮತ್ತು ದಾನಗಳ ಮೂಲಕ ನಿಧಿ ಸಂಗ್ರಹಣೆ ಮಾಡಬಹುದು. ಹೀಗೆ ಸಂಗ್ರಹಿಸಿದ ನಿಧಿಯನ್ನು ಅಕಾಡೆಮಿಯ ಕಾರ್ಯೋದ್ಧೇಶಗಳಿಗೆ ಬಳಸಿದ ಬಗ್ಗೆ ಕನಾಟಕ ಸಾರ್ವಜನಿಕ ಸಂಗ್ರಹಣೆ ಸಂಗ್ರಹಣೆಯಲ್ಲಿ ಪಾರದರ್ಶತತೆ ಅಧಿನಿಯಮ,ಕರ್ನಾಟಕ ಆರ್ಥಿಕ ಸಂಹಿತೆ, ಸಾದಿಲ್ವಾರು ಸಂಹಿತೆ ಪ್ರಕಾರ ಖರ್ಚಿನ ವಿವರಗಳನ್ನು ಇಡುವುದು. ವಂತಿಕೆ ಹಾಗೂ ದಾನ ಕೊಟ್ಟವರು ಆಪೇಕ್ಷಿಸಿದಲ್ಲಿ ಅವರ ವಂತಿಕೆ ಹಾಗೂ ದಾನದ ಮೊತ್ತದ ಖರ್ಚಿನ ವಿವರಗಳನ್ನು ಲಿಖಿತವಾಗಿ ಅವರಿಗೆ ಒದಗಿಸುವುದು.

 

  • ಬ್ಯಾರಿ ಅಕಾಡೆಮಿಯು ತನ್ನ ವಿಷಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ ವಿಚಾರ ಸಂಕಿರಣ, ಕಾರ್ಯಗಾರ, ಸಂವಾದ, ಉನ್ನತಮಟ್ಟದ ಅಕಾಡೆಮಿಕ್ ಉತ್ಸವ ಮುಂತಾದ ಕಾರ್ಯಕ್ರಮಗಳನ್ನು ನಡೆಸುವುದು.

 

  • ಕರ್ನಾಟಕ ಸರ್ಕಾರ, ಕೇಂದ್ರ ಸರ್ಕಾರ ಮತ್ತು ಕೇಂದ್ರ ಅಕಾಡೆಮಿಗಳು ಅಪೇಕ್ಷಿಸಿದಾಗ ಬ್ಯಾರಿ ಸಾಹಿತ್ಯ ಮತ್ತು ಸಂಸ್ಕೃತಿ ಬೆಳವಣಿಗೆಗಾಗಿ ಸೂಕ್ತ ಸಲಹೆಗಳನ್ನು ನೀಡುವುದು.
  • ಬ್ಯಾರಿ ಸಾಹಿತ್ಯ ಅಕಾಡೆಮಿಯು ತಮ್ಮ ಕ್ಷೇತ್ರ ವ್ಯಾಪ್ತಿಗೆ ಸಂಬಂಧಿಸಿದ ಪುಸ್ತಕ ಪ್ರಕಟಣೆಗಳನ್ನು ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮದ ರೀತಿ ಮಾಡುವುದು.

 

  • ಬ್ಯಾರಿ ಅಕಾಡೆಮಿಯು ಬ್ಯಾರಿ ಸಾಂಸ್ಕೃತಿಕ ಮುನ್ನಡೆಗಾಗಿ ಅಗತ್ಯವಿರಬಹುದಾದ ಮೇಲೆ ತಿಳಿಸಿದಂತಹ ಧ್ಯೇಯೋದ್ಧೇಶಗಳಿಗೆ ಅನುಗುಣವಾದ ಕಾರ್ಯಗಳನ್ನು ನಿರ್ವಹಿಸುವುದು.

 

  • ತನ್ನ ಉದ್ದೇಶಗಳ ಮುನ್ನಡೆಗಾಗಿ ಅಗತ್ಯವಿರಬಹುದಾದ ಮೇಲೆ ತಿಳಿಸಿದಂಥ ಧ್ಯೇಯೋದ್ಧೇಶಗಳಿಗೆ ಅನುಗುಣವಾದ ಕಾರ್ಯಗಳನ್ನು ನಿರ್ವಹಿಸುವುದು.

 

  • ಆಯಾ ವರ್ಷ ಆಯವ್ಯಯದ ಪರಿಮಿತಿಯಲ್ಲಿ ಆರ್ಥಿಕ ವರ್ಷದ ಪ್ರಾರಂಭದಲ್ಲಿಯೇ ಕ್ರಿಯಾಯೋಜನೆ ಮತ್ತು ಬಜೆಟನ್ನು ಸಿದ್ಧಪಡಿಸಿ ಸರ್ಕಾರದಿಂದ ಅನುಮೋದನೆ ಪಡೆಯಬೇಕು ಮತ್ತು ಆಪ್ರಕಾರ ಅನುಷ್ಠಾನಗೊಳಿಸಬೇಕು.

 

  • ಬ್ಯಾರಿ ಸಾಹಿತ್ಯ ಅಕಾಡೆಮಿಯು ತಂತಮ್ಮ ಕ್ಷೇತ್ರದ ಪ್ರತಿಭಾನ್ವಿತರಿಗೆ ಪ್ರಶಸ್ತಿ ಪುರಸ್ಕಾರ ಹಾಗೂ ಬಹುಮಾನಗಳನ್ನು ಪ್ರತಿವರ್ಷವೂ ಕೊಡಬೇಕು.

 

ಇತ್ತೀಚಿನ ನವೀಕರಣ​ : 16-10-2020 11:38 AM ಅನುಮೋದಕರು: Approver


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080